alex Certify BREAKING NEWS: ಡಿನೋಟಿಫಿಕೇಷನ್ ಪ್ರಕರಣ – ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡಿನೋಟಿಫಿಕೇಷನ್ ಪ್ರಕರಣ – ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಡಿನೋಟೀಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಏಕಸದಸ್ಯಪೀಠ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ.

ವಾಸುದೇವರೆಡ್ಡಿ ಎಂಬುವವರು 2013ರಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಕೇಸ್ ದಾಖಲಾಗಿತ್ತು. ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...