ಮುಂಬೈ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತ: ರಕುಲ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.
ತಮಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿದ್ದೇನೆ. ಶೀಘ್ರದಲ್ಲೇ ಗುಣಮುಖಳಾಗಿ ಮತ್ತೆ ಶೂಟಿಂಗ್ ಗೆ ಮರಳುತ್ತೆನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ರಕುಲ್ ಮನವಿ ಮಾಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಕುಲ್ ಪ್ರೀತ್ ಸಿಂಗ್ ಕುಟುಂಬದವರ ಜೊತೆ ಮಾಲ್ಡಿವ್ಸ್ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆಗಿದ್ದರು.
https://www.instagram.com/p/CJF_7j_hom4/?utm_source=ig_embed