ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಏಳನೇ ಕಂತಿನ ಹಣವನ್ನು ಡಿಸೆಂಬರ್ 25ರಂದು ರೈತರು ತಂತಮ್ಮ ಖಾತೆಗಳ ಮೂಲಕ ಸ್ವೀಕರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ವಾರ ತಿಳಿಸಿದ್ದರು.
’ಕಿಸಾನ್ ಕಲ್ಯಾಣ್’ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ರೈತರ ಸಮಸ್ಯೆಗಳ ಕುರಿತಾಗಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕೊಟ್ಯಂತರ ರೈತರು ಈ ಕಂತಿನ ಹಣವನ್ನು ಸ್ವೀಕರಿಸಲಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.
ಫೆಬ್ರವರಿ 2019ರಲ್ಲಿ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ದೇಶಾದ್ಯಂತ ಎಲ್ಲಾ ರೈತರಿಗೂ ವಾರ್ಷಿಕ 6000 ರೂಗಳನ್ನು ಮೂರು ಕಂತುಗಳಲ್ಲಿ ನೆರವಿನ ಧನದ ರೂಪದಲ್ಲಿ ಕೊಡಲಾಗುತ್ತಿದೆ. ದೇಶದ 14.5 ಕೋಟಿ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.