![](https://kannadadunia.com/wp-content/uploads/2020/12/Coronavirus-in-India-e1599472053338-6.jpg)
ನವದೆಹಲಿ: ಕಳೆದ 24 ಗಂಟೆಯಲ್ಲಿ 23,950 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,00,99,066ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 333 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,46,444ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2,89,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 96,63,382 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 26,895 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ 10,98,164 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 16,42,68,721 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.