ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ತೀವ್ರ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಕೆಲ ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಇದೀಗ ರಾಗಿಣಿ ತೀವ್ರ ಉಸಿರಾಟದ ಸಮಸ್ಯೆ, ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಗಿಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ನಿನ್ನೆ ರಾಗಿಣಿ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಇದೀಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.