ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭವಾಗಲಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ಈ ಕುರಿತಾಗಿ ಸುತ್ತೋಲೆ ಹೊರಡಿಸಿದ್ದಾರೆ. ಶಾಲೆ ಆರಂಭ, ಮುನ್ನೆಚ್ಚರಿಕೆ ಕ್ರಮ, ಶಾಲೆಗಳ ಸುವ್ಯವಸ್ಥೆ, ಕೊರೋನಾ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.