alex Certify ಜನವರಿ 1 ರಿಂದ ಶಾಲೆ, ವಿದ್ಯಾಗಮ ಆರಂಭ –ಹಾಜರಾತಿ ಕಡ್ಡಾಯವಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 1 ರಿಂದ ಶಾಲೆ, ವಿದ್ಯಾಗಮ ಆರಂಭ –ಹಾಜರಾತಿ ಕಡ್ಡಾಯವಲ್ಲ

ದಾವಣಗೆರೆ: ಜ.1 ರಂದು ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ 10ನೇ ತರಗತಿ ಪ್ರಾರಂಭ ಮತ್ತು 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಶಾಲೆಯ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ಸೂಚನೆ ನೀಡಲಾಗಿರುತ್ತದೆ.

ಮಕ್ಕಳಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳನ್ನು/ವಿದ್ಯಾಗಮ ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚಾರಣ ವಿಧಾನಗಳನ್ನು ಸಿದ್ದಪಡಿಸಿದ್ದು, ಅದರಂತೆ ಕ್ರಮ ವಹಿಸುವಂತೆ ಶಾಲೆಯ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ಸೂಚಿಸಲಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...