ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ಮೂಲಕ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ತೋರಿದ್ದಾರೆ.
ವಿಜಯಪುರ ತಾಲೂಕಿನ ಶಿವಣಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸರ್ಕಾರಿ ಬಸ್ ಮತ್ತು ಓಮಿನಿ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಐವರು ಗಾಯಗೊಂಡಿದ್ದಾರೆ. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಸಂಸದರು ಅಪಘಾತದಲ್ಲಿ ಗಾಯಗೊಂಡವರನ್ನು ಗಮನಿಸಿದ್ದಾರೆ. ಅವರಿಗೆ ಉಪಚರಿಸಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.