ಚಾಮರಾಜನಗರ: ನಾಳೆ ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆಯಲಿದೆ.
ಗ್ರಾಮ ಪಂಚಾಯಿತಿ ಮತದಾನದ ವೇಳೆ ಮತದಾರರು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ(ವೋಟರ್ ಐಡಿ) ಅಥವಾ ಈ ಕೆಳಕಂಡ ದಾಖಲೆಗಳ ಪೈಕಿ ಯಾವುದಾದರು ಒಂದು ದಾಖಲೆಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
ಪಾಸ್ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಆದಾಯ ತೆರಿಗೆ ಗುರುತಿನ ಚೀಟಿ (PAN) ರಾಜ್ಯ / ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗೀ ಔಧ್ಯಮಿಕ ಸಂಘಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು ಸಾರ್ವಜನಿಕ ವಲಯದ ಬ್ಯಾಂಕ್/ ಕಿಸಾನ್ ಮತ್ತು ಅಂಚೆ ಕಛೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ಮಾನ್ಯತೆ ಪಡೆದ ನೋಂದಾಯಿತ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿಗಳು ಭಾವಚಿತ್ರವಿರುವ ನೋಂದಾಯಿತಿ ಡೀಡ್ಗಳು / ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು, ಭಾವಚಿತ್ರವಿರುವ ಪಡಿತರ ಚೀಟಿಗಳು (ರೇಷನ್ ಕಾರ್ಡ್) ಸಕ್ಷಮ ಪ್ರಾಧಿಕಾರ ನೀಡಿರುವ ಎಸ್.ಸಿ, ಎಸ್.ಟಿ, ಒ.ಬಿ.ಸಿ ಭಾವಚಿತ್ರವಿರುವ ಪ್ರಮಾಣ ಪತ್ರಗಳು ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ / ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ದಾಪ್ಯ ವೇತನ ಆದೇಶಗಳು, ವಿಧವಾ ವೇತನ ಆದೇಶಗಳು ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಿಗಿ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ತೋರಿಸಬಹುದು.
ಮಾಜಿ ಯೋಧರ ಭಾವಚಿತ್ರವಿರುವ ಸಿ.ಎಸ್.ಡಿ. ಕ್ಯಾಂಟೀನ್ ಕಾರ್ಡ್, ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, ನರೇಗಾ ಯೋಜನೆಯ ಅಡಿಯಲ್ಲಿ ನೀಡಿರುವ ಭಾವಚಿತ್ರವಿರುವ ಉದ್ಯೋಗ ಕಾರ್ಡ್, ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರೀಕರ ಗುರುತಿನ ಚೀಟಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡಿರುವ ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರವಿರುವ ತಾತ್ಕಾಲಿಕ / ಮೂಲ ಪಡಿತರ ಚೀಟಿ ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್ಗಳು (ಕಾರ್ಮಿಕ ಮಂತ್ರಾಲಯ ಯೋಜನೆ) ಆಧಾರ್ ಕಾರ್ಡ್ ತೋರಿಸಬಹುದಾಗಿದೆ ಎಂದು ಹೇಳಲಾಗಿದೆ.