ದಾಸವಾಳವನ್ನು ಹೆಚ್ಚಾಗಿ ಕೂದಲಿನ ಆರೈಕೆಗೆ ಬಳಸುತ್ತಾರೆ. ಆದರೆ ಈ ದಾಸವಾಳದಿಂದ ದೇಹದ ಆರೋಗ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ದಾಸವಾಳ ಚಹಾ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ.
*ದಾಸವಾಳದ ಚಹಾವನ್ನು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ಬರುತ್ತದೆ.
*ದಾಸವಾಳ ಬ್ಯಾಕ್ಟೀರಿಯಾ, ಸೂಕ್ಷ್ಮಾಣುಜೀವಿಗಳ ವಿರುದ್ಧ ಹೋರಾಡುತ್ತದೆ. ಇದರಿಂದ ಸೋಂಕುಗಳನ್ನು ತಡೆಗಟ್ಟಬಹುದು.
*ದಾಸವಾಳ ಚಹಾವನ್ನು ನಿಯಮಿತವಾಗಿ ಸೇವಿಸುವುದರಿಂದ ಕೊಬ್ಬು ಕರಗಿ ತೂಕ ನಷ್ಟಕ್ಕೆ ಸಹಾಯಕವಾಗುತ್ತದೆ.
*ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕ್ಯಾನ್ಸರ್ ಜೀವಕೋಶಘಳ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ.