alex Certify ಯುವತಿಗೆ ಮತ್ತು ಬರುವ ಕೇಕ್ ಕೊಟ್ಟು ರೇಪ್, ವಿಡಿಯೋ ತೋರಿಸಿ ಮತ್ತೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಗೆ ಮತ್ತು ಬರುವ ಕೇಕ್ ಕೊಟ್ಟು ರೇಪ್, ವಿಡಿಯೋ ತೋರಿಸಿ ಮತ್ತೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಪರಿಚಯಸ್ಥ ಯುವತಿಗೆ ಕೇಕ್ ನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಕೊಟ್ಟು ಅತ್ಯಾಚಾರವೆಸಗಿದ್ದ ಆರೋಪಿಯನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ್ ಗೌಡ(25) ಬಂಧಿತ ಆರೋಪಿ ಎಂದು ಹೇಳಲಾಗಿದೆ. 26 ವರ್ಷದ ಸಂತ್ರಸ್ತೆ ಲಗ್ಗೆರೆ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಆರೋಪಿ ಪರಿಚಯವಾಗಿದ್ದ. ಇಬ್ಬರೂ ಫೋನ್ ಸಂಪರ್ಕದಲ್ಲಿದ್ದರು. ಅಕ್ಕನ ಮನೆಗೆ ಬರುವಂತೆ ಆಹ್ವಾನಿಸಿದ್ದ ಆರೋಪಿ ತನ್ನ ರೂಮ್ ಗೆ ಕರೆಸಿಕೊಂಡು ಮತ್ತು ಬರುವ ಪದಾರ್ಥ ಬೆಳೆಸಿದ್ದ ಕೇಕ್ ಕೊಟ್ಟಿದ್ದಾನೆ. ಇದಾದ ನಂತರದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿ ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ವಿಡಿಯೋ ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲೇ ಒಂದು ಲಕ್ಷ ರೂಪಾಯಿ ವಸೂಲಿ ಮಾಡಿದ್ದಾನೆ. ನೊಂದ ಯುವತಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...