ಗುಜರಾತ್ನ ಅಹಮದಾಬಾದ್ನಲ್ಲಿ ಕೊರೊನಾ ಲಸಿಕೆಗಾಗಿ ನೋಂದಣಿ ಮಾಡಲು ಆದ್ಯತೆಯ ಆಧಾರದ ಜನರಿಗೆ ಆನ್ಲೈನ್ ಸೌಲಭ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಹಮದಾಬಾದ್ ಮುನ್ಸಿಪಾಲಿಟಿ ಪ್ರಕಾರ www.ahmedabadcity.gov ನಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಬಹುದಾಗಿದೆ.
ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು. 50 ವರ್ಷಕ್ಕಿಂತ ಮೇಲ್ಪಟ್ಟವರಿಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊರೊನಾ ಲಸಿಕೆಗಾಗಿ ತಮ್ಮನ್ನ ನೋಂದಾಯಿಸಿಕೊಳ್ಳಬಯಸುವ ಜನರು ತಮ್ಮ ಡ್ರೈವಿಂಗ್ ಲೈಸೆನ್ಸ್, ಮತದಾರರ ಗುರುತಿನ ಚೀಟಿ ಹಾಗೂ ಪಾನ್ ಕಾರ್ಡ್ಗಳನ್ನ ನೀಡಬಹುದಾಗಿದೆ.
ಕೊರೊನಾ ಲಸಿಕೆಯ ಮೊದಲ ಹಂತದ ಆದ್ಯತೆಯ ಗುಂಪಾಗಿ ಸುಮಾರು 3.9 ಲಕ್ಷ ಆರೋಗ್ಯ ಕಾರ್ಯಕರ್ತರನ್ನ ಈಗಾಗಲೇ ಗುರುತಿಸಲಾಗಿದೆ ಎಂದು ಗುಜರಾತ್ ಸರ್ಕಾರ ಈ ಹಿಂದೆ ತಿಳಿಸಿತ್ತು.