ಮೈಸೂರಿನ ಆರ್.ಎಸ್.ಎಸ್. ಕಚೇರಿಗೆ ನಿವೃತ್ತ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಅಣ್ಣಾಮಲೈ ಭೇಟಿ ನೀಡಿದ್ದಾರೆ. ಮೈಸೂರಿಗೆ ಆಗಮಿಸಿದ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. ಅವರು ಬಿಜೆಪಿ ಮುಖಂಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ ಅವರು, ದ್ರಾವಿಡ ನೆಲದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿಗಿಂತ ಮೊದಲು ಕಾಂಗ್ರೆಸ್ ಪಕ್ಷ ಪ್ರಬಲವಾಗಿತ್ತು. ನಂತರದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿವೆ. ಮುಂದಿನ ದಿನಗಳಲ್ಲಿ ಬಿಜೆಪಿ ಕೂಡ ಪ್ರಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಸಂಘಟನೆ ಬಲವಾಗುತ್ತಿದೆ. ಮುಂದಿನ ಚುನಾವಣೆಗೆ ಅನುಕೂಲವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಕ್ಷದತ್ತ ಬರುತ್ತಿದ್ದಾರೆ ಎಂದು ತಿಳಿಸಿದ್ದಾರೆ.