ಮಂಡ್ಯ: ಗ್ರಾಮ ಪಂಚಾಯತಿ ಚುನಾವಣೆ ವೇಳೆ ಅಭ್ಯರ್ಥಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಶೆಟ್ಟಹಳ್ಳಿಯಲ್ಲಿ ಅಭ್ಯರ್ಥಿ ತಮ್ಮಣ್ಣ ಅವರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ.
ಕಲ್ಲಿನಿಂದ ತಮ್ಮಣ್ಣನ ತಲೆಗೆ ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಅದೇ ಗ್ರಾಮದ ಇಬ್ಬರು ಕಲ್ಲಿನಿಂದ ಹೊಡೆದು ಪರಾರಿಯಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಮತಚಲಾಯಿಸಲು ಆಗಮಿಸಿದ ವೇಳೆ ಮತಗಟ್ಟೆ ಬಳಿ ಹಲ್ಲೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಕೆ. ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.