ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂಪನ್ಮೂಲ ಕ್ರೋಢೀಕರಿಸಿ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.