ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಇದನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧರಿಸಲಾಗಿದೆ. ಕಸ್ತೂರಿರಂಗನ್ ವರದಿ ಅವೈಜ್ಞಾನಿಕವಾಗಿದೆ. ಇದಕ್ಕೆ ಕರ್ನಾಟಕದ ವಿರೋಧ ಇದೆ. ಈ ಕುರಿತಾಗಿ ಕೇಂದ್ರ ಪರಿಸರ ಇಲಾಖೆಗೆ ಎರಡು ದಿನದಲ್ಲಿ ಪತ್ರ ಬರೆಯಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೇಂದ್ರ ಪರಿಸರ ಇಲಾಖೆಗೆ ಪತ್ರ ಬರೆಯಲಿದ್ದು, ನಮ್ಮ ವಿರುದ್ಧ ನಿರ್ಧಾರ ಬಂದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.