alex Certify ಮಧುಮೇಹ ಸಮಸ್ಯೆಯಿಂದ ದೂರವಿರಲು ಅಭ್ಯಾಸ ಮಾಡಿ ಈ ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧುಮೇಹ ಸಮಸ್ಯೆಯಿಂದ ದೂರವಿರಲು ಅಭ್ಯಾಸ ಮಾಡಿ ಈ ಯೋಗ

ಮಧುಮೇಹ ಸಮಸ್ಯೆಗೆ ಒತ್ತಡ ಪ್ರಮುಖ ಕಾರಣವಾಗಿದೆ. ಇದು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಯೋಗಗಳನ್ನು ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ. ಇದರಿಂದ ಗ್ಲೂಕೋಸ್ ಮಟ್ಟ ಕಡಿಮೆಯಾಗಿ ಇನ್ಸುಲಿನ್ ಕ್ರಿಯೆ ಸುಧಾರಿಸುತ್ತದೆ. ಹಾಗಾಗಿ ಪ್ರತಿದಿನ ಈ ಯೋಗಗಳನ್ನು ಅಭ್ಯಾಸ ಮಾಡಿ

*ಬಾಲಾಸನ : ಇದು ಬಹಳಷ್ಟು ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ. ಒತ್ತಡ ಆಯಾಸವನ್ನು ಕಡಿಮೆ ಮಾಡುತ್ತದೆ.

*ವಜ್ರಾಸನ : ಇದು ಕೂಡ ಮನಸ್ಸನ್ನು ವಿಶ್ರಾಂತಿಗೊಳಿಸಲು, ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

* ಹಲಾಸನ : ಇದರಿಂದ ಥೈರಾಯ್ಡ್ ಗ್ರಂಥಿಗಳು, ಪ್ಯಾರಾಥೈರಾಯ್ಡ್ ಗ್ರಂಥಿಗಳು, ಶ್ವಾಸಕೋಶ ಮತ್ತು ಕಿಬ್ಬೊಟ್ಟೆಯ ಅಂಗಗಳನ್ನು ಉತ್ತೇಜಿಸುತ್ತದೆ. ಇದರಿಂದ ತಲೆ ಮತ್ತು ಮುಖದ ಭಾಗಕ್ಕೆ ರಕ್ತ ಸಂಚಾರ ಸರಾಗವಾಗುತ್ತದೆ. ಇದು ಹಾರ್ಮೋನ್ ಮಟ್ಟವನ್ನು ನಿಯಂತ್ರಿಸುತ್ತದೆ.

*ಧನುರಾಸನ : ಇದು ಒತ್ತಡ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ. ಅದರ ಜೊತೆಗೆ ಬೆನ್ನು ಮೂಳೆಯನ್ನು ಬಲಪಡಿಸುತ್ತದೆ, ಸಂತಾನೋತ್ಪತ್ತಿ ಅಂಗಗಳನ್ನು ಉತ್ತೇಜಿಸಲು, ಮುಟ್ಟಿನ ನೋವನ್ನು ನಿವಾರಿಸಲು ಸಹಕಾರಿಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...