ಧಾರವಾಡ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2020 – 21 ನೇ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಸ್.ಎಸ್.ಎಲ್.ಸಿ ಮತ್ತು ಹೆಚ್ಚಿನ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಜನೆವರಿ.15 ರೊಳಗಾಗಿ www.dwdsc.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ ಪ್ರತಿಯನ್ನು ಆಯಾ ತಾಲೂಕಿನ, ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಧಾರವಾಡ: 9742757903, ಹುಬ್ಬಳ್ಳಿ 9164347001, ಕಲಘಟಗಿ 6363695794, ನವಲಗುಂದ 9663271200 ಮತ್ತು ಕುಂದಗೋಳ 8880570833 ಹಾಗೂ ಕಚೇರಿ ದೂರವಾಣಿ ಸಂಖ್ಯೆ 0836-2744474 ಗೆ ಸಂಪರ್ಕಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.