ಬೆಳಗಾವಿ: ವಿವಾಹಿತ ಮಹಿಳೆಯ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿಯೊಬ್ಬ, ಮಹಿಳೆ ತನ್ನ ಪ್ರೀತಿ ನಿರಾಕರಿಸಿದ್ದಕ್ಕಾಗಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಸುಧಾ ಹಡಪದ ಕೊಲೆಯಾದ ಮಹಿಳೆ. ಈಗಾಗಲೇ ವಿವಾಹವಾಗಿದ್ದ ಸುಧಾಳಿಗೆ ಭಗ್ನ ಪ್ರೇಮಿ ಈರಣ್ಣ ಎಂಬಾತ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದ ಮಹಿಳೆ ಆತನನ್ನು ನಿರ್ಲಕ್ಷ್ಯ ಮಾಡಿದ್ದಳು. ಇದರಿಂದ ಕೋಪಗೊಂಡ ಆರೋಪಿ ಸುಧಾಳನ್ನು ಆಸ್ಪತ್ರೆ ಆವರಣದಲ್ಲಿಯೇ ತಲವಾರ್ ನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.