
ನಂದಕಿಶೋರ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ತೆಲುಗಿನಲ್ಲೂ ಕೂಡ ರಿಲೀಸ್ ಆಗಲಿದ್ದು ‘ಪೊಗರು’ ಚಿತ್ರದ ‘ಖರಾಬು’ ಹಾಡು ಈಗಾಗಲೇ ಕನ್ನಡದಲ್ಲಿ ಸೂಪರ್ ಡೂಪರ್ ಹಿಟ್ ಆಗಿದೆ. ತೆಲುಗಿನಲ್ಲಿ ಬಿಡುಗಡೆಯಾಗಿದ್ದ ಈ ಹಾಡು 50 ಮಿಲಿಯನ್ ವೀಕ್ಷಣೆ ಪಡೆದು ಮುನ್ನುಗ್ಗುತ್ತಲೇ ಇದೆ.
ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಈಗಾಗಲೇ ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.
‘ಪೊಗರು’ ಚಿತ್ರದ ತೆಲುಗಿನ ಟೀಸರ್ ಅನ್ನು ನಾಳೆ ಹೊಸವರ್ಷದ ಪ್ರಯುಕ್ತ ಆದಿತ್ಯ ಮ್ಯೂಸಿಕ್ ನಲ್ಲಿ ರಿಲೀಸ್ ಮಾಡಲಿದ್ದಾರೆ.