alex Certify ಹೊಸ ವರ್ಷದ ಹೊತ್ತಲ್ಲೇ ಸಾರಿಗೆ ಸಚಿವಾಲಯದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ಹೊತ್ತಲ್ಲೇ ಸಾರಿಗೆ ಸಚಿವಾಲಯದಿಂದ ಸಿಹಿ ಸುದ್ದಿ

ನವದೆಹಲಿ: ಹೊಸ ವರ್ಷದ ಮುನ್ನಾದಿನವೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಸಿಹಿಸುದ್ದಿ ನೀಡಲಾಗಿದೆ.

ಎಲ್ಲಾ ನಾಲ್ಕು ಚಕ್ರದ ವಾಹನಗಳಿಗೆ ಮತ್ತು ವಾಣಿಜ್ಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲು ವಿಧಿಸಿದ್ದ ಅಂತಿಮ ಗಡುವನ್ನು ವಿಸ್ತರಿಸಲಾಗಿದೆ. 2020 ರ ಡಿಸೆಂಬರ್ 31 ಕ್ಕೆ ನಿಗದಿಪಡಿಸಿದ್ದ ಗಡುವನ್ನು ಒಂದೂವರೆ ತಿಂಗಳು ವಿಸ್ತರಿಸಲಾಗಿದೆ.

ದೇಶದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ ಜನವರಿ 1 ರಿಂದ ಜಾರಿಗೆ ಬರುವಂತೆ ನಿಯಮ ರೂಪಿಸಿದ್ದು, ಆದರೆ, ಫೆಬ್ರವರಿ 15 ರವರೆಗೆ ಗಡುವು ಮುಂದೂಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಹೆದ್ದಾರಿ ಟೋಲ್ ಶುಲ್ಕ ಸಂಗ್ರಹವನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಗದು ರಹಿತ ವಹಿವಾಟು, ಸಮಯ, ಇಂಧನ ಉಳಿತಾಯ ಮೊದಲಾದ ಉದ್ದೇಶದಿಂದ ಎಲ್ಲಾ 4 ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...