ನವದೆಹಲಿ: ಹೊಸ ವರ್ಷದ ದಿನವೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ದೇಶದಲ್ಲಿ ಕೋವಿಡ್ ಲಸಿಕೆ ತುರ್ತು ಬಳಕೆಗೆ ಒಪ್ಪಿಗೆ ನೀಡಲಾಗಿದ್ದು, ಹೀಗೆ ಒಪ್ಪಿಗೆ ಪಡೆದ ಮೊದಲ ಕೊರೋನಾ ಲಸಿಕೆ ಕೋವಿಶೀಲ್ಡ್ ಆಗಿದೆ.
ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಶಿಫಾರಸಿಗೆ ತೀರ್ಮಾನಿಸಲಾಗಿದೆ.
ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ಕೋವಿಶೀಲ್ಡ್ ಲಸಿಕೆ ತುರ್ತು ಬಳಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಕಂಪನಿಗಳ ಸಹಯೋಗದಲ್ಲಿ ಭಾರತದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಲಸಿಕೆ ಉತ್ಪಾದಿಸುತ್ತಿದೆ.
ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆ ಪ್ರಯೋಗದಲ್ಲಿ ಯಶಸ್ವಿಯಾಗಿದ್ದು, ತುರ್ತು ಬಳಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಹೇಳಲಾಗಿದೆ.