ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಬಹುದಿನಗಳ ನಂತರ ಶಾಲೆಯಲ್ಲಿ ಮಕ್ಕಳ ಕಲರವ ಕೇಳಿಬಂದಿದೆ.
10, 12 ನೇ ತರಗತಿ ಮಕ್ಕಳಿಗೆ ಪಠ್ಯ ಕಡಿತ ಮತ್ತು ಪರೀಕ್ಷೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
10 ಮತ್ತು 12ನೇ ತರಗತಿಯ ಪಠ್ಯ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಚರ್ಚೆ ನಡೆಸಲಾಗುವುದು. 10 ಮತ್ತು 12ನೇ ತರಗತಿ ಪರೀಕ್ಷೆಗೆ ಬುಧವಾರ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು. ಪರೀಕ್ಷೆಗೆ ಅಗತ್ಯವಾದ ಪಠ್ಯವನ್ನು ಮಾತ್ರ ಕೊಡಲಾಗುವುದು. ಮಕ್ಕಳು ಒತ್ತಡಕ್ಕೆ ಒಳಗಾಗುವುದು ಬೇಡ. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಪಠ್ಯ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.