ಬೆಂಗಳೂರು: ಶಿಕ್ಷಕರಿಗೆ ಕೊರೋನಾ ಟೆಸ್ಟ್ ಕಡ್ಡಾಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕರು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಶಾಲೆಗೆ ಬರಬೇಕು. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಬರುವಂತೆ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 10 ನೇ ತರಗತಿ, ದ್ವಿತೀಯ ಪಿಯುಸಿ ತರಗತಿ ಇಂದಿನಿಂದ ಆರಂಭವಾಗಿದ್ದು, ಶಾಲೆ ಆವರಣದಲ್ಲಿ 6 ರಿಂದ 9 ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆ ಶುರುವಾಗಿದೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿದೆ. ಈಗ ಶಿಕ್ಷಕರು ಕಡ್ಡಾಯವಾಗಿ ಕೊರೋನಾ ಟೆಸ್ಟ್ ಮಾಡಿಸಿಕೊಂಡು ಬರಬೇಕಿದೆ ಎಂದು ಹೇಳಲಾಗಿದೆ.