ಇಸ್ಲಾಮಾಬಾದ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಝಾಕಿ ಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಲಷ್ಕರ್ ಎ ತೊಯ್ಬಾ ಸಂಘಟನೆಯ ಕಮಾಂಡರ್ ಝಾಕಿ ಉರ್ ರೆಹಮಾನ್ ಲಖ್ವಿ ಹಣಕಾಸು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತನಾಗಿದ್ದಾನೆ. 2008 ರಲ್ಲಿ ವಿಶ್ವಸಂಸ್ಥೆ ಸೆಕ್ಯೂರಿಟಿ ಕೌನ್ಸಿಲ್ 26/11 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಲಖ್ವಿಯನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ.
ಮುಂಬೈನಲ್ಲಿ 10 ಮಂದಿ ಶಸ್ತ್ರಸಜ್ಜಿತ ಲಷ್ಕರ್-ಎ-ತೊಯ್ಬಾ ಉಗ್ರರು ದಾಳಿ ನಡೆಸಿ 166 ಅಧಿಕ ಮಂದಿಯನ್ನು ಹತ್ಯೆ ಮಾಡಿದ್ದರು. 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.