ಬೆಂಗಳೂರು: ಗ್ರಾಮ ಪಂಚಾಯಿತಿ ಫಲಿತಾಂಶ ಪ್ರಕಟವಾಗಿದ್ದು, ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿ ಮಾಡಲು ಮಾರ್ಗಸೂಚಿ ಹೊರಡಿಸಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯನ್ನು 5 ವರ್ಷಗಳ ಬದಲಿಗೆ ಎರಡೂವರೆ ವರ್ಷಗಳಿಗೆ ಸೀಮಿತಗೊಳಿಸಲಾಗಿದೆ. ಹೊಸದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗುವವರು 30 ತಿಂಗಳು ಆಡಳಿತ ನಡೆಸಬಹುದಾಗಿದೆ.
ಉಳಿದ ಅವಧಿಗೆ ಮತ್ತೆ ಹೊಸದಾಗಿ ಮೀಸಲಾತಿ ಪ್ರಕಟಿಸಲಾಗುತ್ತದೆ. ರಾಜ್ಯದ 5956 ಗ್ರಾಪಂಗಳಿಗೆ ಜಿಲ್ಲಾಧಿಕಾರಿಗಳು ಮೀಸಲಾತಿ ನಿಗದಿಪಡಿಸಲು ಮಾರ್ಗಸೂಚಿ ಹೊರಡಿಸಲಾಗಿದೆ.