ನವದೆಹಲಿ: ಸೀರಮ್ ಇನ್ಸ್ಟಿಟ್ಯೂಟ್ ಇಂಡಿಯಾ ತಯಾರಿಸುತ್ತಿರುವ ಕೊರೊನಾ ಲಸಿಕೆ ಹಾಗೂ ಭಾರತ್ ಭಯೋಟೆಕ್ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಶೋಧಕರಿಗೆ ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿರುವ ಪ್ರಧಾನಿ ಮೋದಿ, ಆತ್ಮನಿರ್ಭರ ಭಾರತದ ಕನಸು ನನಸಾಗಿದೆ. ಸಂಶೋಧಕರು ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ. ನಿಮ್ಮ ಸಾಧನೆಯಿಂದ ನಮ್ಮ ಜೀವ ಬದುಕಿದೆ. ಭಾರತೀಯರ ಪಾಲಿಗೆ ಇಂದು ಮಹತ್ವದ ದಿನ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ವಿಜ್ಞಾನಿಗಳು, ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ ಎಲ್ಲಾ ಕೊರೊನಾ ವಾರಿಯರ್ಸ್ ಗಳಿಗೂ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ದೇಶದಲ್ಲಿ ಪ್ರತಿಕೂಲ ಸಂದರ್ಭ ಎದುರಾದ ಅನೇಕ ಜೀವಗಳನ್ನು ಉಳಿಸಿದ್ದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.