ಕೋಲಾರ: ಕಾಯಕ ಯೋಜನೆಯ ಮೂಲಕ ಮಹಿಳಾ ಸಂಘಗಳಿಗೆ 10 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ನಡೆದ ಕಾಯಕ ಯೋಜನೆ ಅನುಷ್ಠಾನ ಕುರಿತು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷೆಯ ಕಾಯಕ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿ ಉದ್ಯೋಗ ಕ್ರಾಂತಿಗೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮುಂದಾಗಿದೆ ಎಂದು ಹೇಳಿದ್ದಾರೆ.
10 ಮಂದಿ ಸದಸ್ಯರು ಇರುವ ಪ್ರತಿ ಮಹಿಳಾ ಸ್ವಸಹಾಯ ಸಂಘಗಳಿಗೆ 10 ಲಕ್ಷ ರೂಪಾಯಿವರೆಗೆ ಯಾವುದೇ ಭದ್ರತೆ ಇಲ್ಲದೇ ಸಾಲ ನೀಡಲಿದ್ದು, ಈ ಸಾಲದಲ್ಲಿ 5 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರ, ಇನ್ನುಳಿದ 5 ಲಕ್ಷಕ್ಕೆ ಶೇಕಡ 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಹೇಳಲಾಗಿದೆ.