ಬೆಂಗಳೂರು: ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ನಿರಾಸೆಯಲ್ಲೇ ದಿನ ದೂಡುವಂತಾಗಿದೆ.
ಯಥಾಸ್ಥಿತಿಗೆ ಕೆಎಟಿ ಆದೇಶ ನೀಡಿದ ಪರಿಣಾಮ ಶಿಕ್ಷಕರ ವರ್ಗಾವಣೆ ಅತಂತ್ರವಾಗಿದೆ. 2019 -20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಪ್ರಸಿದ್ಧ ವರ್ಗಾವಣೆ ಸಂದರ್ಭದಲ್ಲಿ ವಿಶೇಷ ಆದ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕೆಎಟಿ ಆದೇಶ ನೀಡಿದೆ.
2016 -17 ರಲ್ಲಿ ಹೆಚ್ಚುವರಿ ವರ್ಗಾವಣೆಯಾಗಿ ಹೊರಗಿನ ತಾಲೂಕಿಗೆ ಹೋದ ಕೆಲವು ಶಿಕ್ಷಕರು ಕೆಎಟಿಗೆ ಅರ್ಜಿ ಸಲ್ಲಿಸಿದ್ದು, ಹೀಗಾಗಿ ಯಥಾಸ್ಥಿತಿಗೆ ಕೆಎಟಿ ಆದೇಶಿಸಿದೆ. ಇದರಿಂದಾಗಿ ಸುಮಾರು 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಾಗದೇ ನಿರಾಸೆಯಲ್ಲಿದ್ದಾರೆ.
ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಎಟಿ ತಡೆ ನೀಡಿದ್ದು, ತೆರವಿನ ಕುರಿತಾಗಿ ಅಡ್ವೋಕೇಟ್ ಜನರಲ್ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲು ತಿಳಿಸಿದ್ದಾರೆ ಎನ್ನಲಾಗಿದೆ.