ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರನ್ನು ಕಾಡುವ ಸಮಸ್ಯೆ ಎಂದರೆ ಅದು ತೂಕ ಹೆಚ್ಚಳವಾಗುವುದು. ಅತಿಯಾಗಿ ಆಹಾರ ಸೇವನೆ ಮತ್ತು ದೈಹಿಕ ಚಟುವಟಕೆಗಳ ಕೊರತೆಯಿಂದ ತೂಕ ಹೆಚ್ಚಳವಾಗುತ್ತದೆ. ಈ ತೂಕವನ್ನು ಇಳಿಸಿಕೊಳ್ಳಲು ಕೆಲವರು ವ್ಯಾಯಾಮ, ವಾಕಿಂಗ್ ಮುಂತಾದವುಗಳನ್ನು ಮಾಡುತ್ತಾರೆ. ಹಾಗಾಗಿ ತೂಕ ಸುಲಭವಾಗಿ ಇಳಿಸಿಕೊಳ್ಳಲು ನಿಂಬೆ ಮತ್ತು ಬೆಲ್ಲದ ಪಾನಕ ಸೇವಿಸಿ.
ಬೆಲ್ಲ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ತೂಕವನ್ನು ತ್ವರಿತವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಲ್ಲದಲ್ಲಿ ಪ್ರೋಟೀನ್ ಮತ್ತು ಫೈಬರ್ ಇದೆ. ಇದು ತೂಕ ಇಳಿಸಲು ಸಹಕಾರಿ. ಹಾಗೇ ನಿಂಬೆ ಹಣ್ಣಿನಲ್ಲಿರುವ ಪೋಷಕಾಂಶಗಳು ತೂಕ ಇಳಿಸಲು ಸಹಕಾರಿಯಾಗಿದೆ. ಇದು ದೇಹದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಮತ್ತು ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುತ್ತದೆ.
ಹಾಗಾಗಿ ಒಂದು ಲೋಟ ನೀರಿಗೆ 1 ಚಮಚ ಬೆಲ್ಲದ ಪುಡಿ ಮತ್ತು 1 ಚಮಚ ನಿಂಬೆ ರಸವನ್ನು ಮಿಕ್ಸ್ ಮಾಡಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಇದರಿಂದ ತೂಕ ಕಡಿಮೆಯಾಗುತ್ತದೆ.