ಸಾರು, ಪಲ್ಯದ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪಿನ ಸೇವನೆಯಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ವಿಟಮಿನ್ ಎ, ಸಿ ಮತ್ತು ಪೊಟ್ಯಾಸಿಯಮ್, ಕ್ಯಾಲ್ಸಿಯಂಗಳಿದ್ದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಸೊಪ್ಪು ಸೇವನೆಯಿಂದ ಜೀರ್ಣಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಹೊಟ್ಟೆ ನೋವಿನಿಂದ ಮುಕ್ತಿ ಸಿಗುತ್ತದೆ. ಇದನ್ನು ಮಜ್ಜಿಗೆಯೊಂದಿಗೆ ಬೆರೆಸಿ ಕುಡಿದರೆ ಅಜೀರ್ಣ, ವಾಕರಿಕೆಯಂಥ ಗ್ಯಾಸ್ಟ್ರಿಕ್ ಸಮಸ್ಯೆ ದೂರವಾಗುತ್ತದೆ.
ಅತಿಸಾರದ ಸಮಸ್ಯೆಗೆ ಕೊತ್ತಂಬರಿ ಸೊಪ್ಪಿನ ಚಟ್ನಿ ಅತ್ಯುತ್ತಮ ಮದ್ದಾಗಬಲ್ಲದು. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಶೀತ, ಕೆಮ್ಮು ಹತ್ತಿರವೂ ಸುಳಿಯುವುದಿಲ್ಲ. ಸಂಧಿವಾತದ ಸಮಸ್ಯೆಗೂ ಇದು ಮದ್ದಾಗಬಲ್ಲದು.
ಕೊತ್ತಂಬರಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು ಆ ನೀರನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ. ಮಧುಮೇಹಿಗಳಿಗೂ ಇದು ಉಪಕಾರಿ, ರಕ್ತದ ಇನ್ಸುಲಿನ್ ಪ್ರಮಾಣವನ್ನು ಇದು ಕಡಿಮೆ ಮಾಡುತ್ತದೆ.