ಬೆಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಲಾಗಿದೆ.
ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.
2021 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಆದೇಶ ಅನ್ವಯವಾಗಲಿದೆ. ಈ ಅವಧಿಯಲ್ಲಿ ನಿವೃತ್ತರಾಗುವ ನೌಕರರು, ಅಧಿಕಾರಿಗಳಿಗೆ ರಜೆ ನಗದೀಕರಣ ಸೌಲಭ್ಯ ಇರುತ್ತದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ಸರ್ಕಾರದ ನೆರವು ಪಡೆಯುವ, ಪಡೆಯದ ಎಲ್ಲಾ ಸರ್ಕಾರಿ ಉದ್ದಿಮೆಗಳ ನೌಕರರಿಗೆ ಸೌಲಭ್ಯ ಇರುವುದಿಲ್ಲ ಎಂದು ಹಣಕಾಸು ಇಲಾಖೆ ಆದೇಶ ಹೊರಡಿಸಿದೆ.