alex Certify ಕೊರೊನಾ ಲಸಿಕೆ ಕುರಿತಾಗಿ ಸಚಿವ ಸುಧಾಕರ್ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಕುರಿತಾಗಿ ಸಚಿವ ಸುಧಾಕರ್ ಗುಡ್ ನ್ಯೂಸ್

ಬೆಂಗಳೂರು: ಭಾರತದಲ್ಲಿ ಕೊರೋನಾ ಲಸಿಕೆ ವಿತರಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಲಸಿಕೆ ವಿತರಣೆಗೆ ಸಕಲ ಸಿದ್ಧತೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. 2,73,211 ಸರ್ಕಾರಿ ಹಾಗೂ 3,57,313 ಖಾಸಗಿ ಸೇರಿ ಒಟ್ಟು 6,30,524 ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಲಸಿಕೆ ನೀಡಲು ತರಬೇತಿ ಪಡೆದ 9807 ಅನುಭವಿ ವ್ಯಾಕ್ಸಿನೇಷನ್ ಸಿಬ್ಬಂದಿಗಳನ್ನು ಮತ್ತು ರಾಜ್ಯಾದ್ಯಂತ 28,427 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇನ್ನು ಹೆಚ್ಚಿನ ಕೇಂದ್ರಗಳನ್ನು ಗುರುತಿಸಲಾಗುವುದು ಎಂದು ಹೇಳಿದ್ದಾರೆ.

ಎಲ್ಲ ದತ್ತಾಂಶವನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದ ‘ಕೋವಿನ್’ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಇದುವರೆಗೆ 64 ಬೃಹತ್ ಐಸ್ ಲೈನ್ಡ್ ರೆಫ್ರಿಜಿರೇಟರ್, 24 ಲಕ್ಷ ಸಿರಿಂಜ್ ಗಳು ರಾಜ್ಯಕ್ಕೆ ಬಂದಿವೆ. ಅವುಗಳನ್ನು ಜಿಲ್ಲೆಗಳಿಗೆ ರವಾನಿಸಲಾಗಿದೆ. 31 ಲಕ್ಷ ಸಿರಿಂಜ್ ಗಳು ಸೇರಿದಂತೆ ಹೆಚ್ಚುವರಿ ಉಪಕರಣಗಳು ಶೀಘ್ರದಲ್ಲೇ ತಲುಪಲಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...