ಈ ಬಾರಿಯ ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಮಾಹಿತಿ ನೀಡಿದೆ. ಜನವರಿ 29ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಈ ದಿನ ಲೋಕಸಭೆ ಹಾಗೂ ರಾಜ್ಯಸಭೆಗಳನ್ನುದ್ದೇಶಿಸಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಮಾತನಾಡಲಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಎರಡು ಹಂತಗಳಲ್ಲಿ ನಡೆಯಲಿದೆ. ಜನವರಿ 29ರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣದಿಂದ ಆರಂಭವಾಗುವ ಅಧಿವೇಶನ ಫೆಬ್ರವರಿ 15ರಂದು ಅಂತ್ಯವಾಗಲಿದೆ. ಎರಡನೇ ಹಂತ ಮಾರ್ಚ್ 8ಕ್ಕೆ ಆರಂಭವಾಗಿ ಏಪ್ರಿಲ್ 8ಕ್ಕೆ ಕೊನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭೆ ಹಾಗೂ ಲೋಕಸಭೆಯ ಸಂಸತ್ ಕಲಾಪ ಪ್ರತಿದಿನ ನಾಲ್ಕು ಗಂಟೆಗಳ ಅವಧಿಯಲ್ಲಿ ನಡೆಯಲಿದೆ.