alex Certify ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಕೃಷಿ ಸಂಜೀವಿನಿ’ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಕೃಷಿ ಸಂಜೀವಿನಿ’ ಯೋಜನೆ

ಬೆಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು, ಕೀಟ ರೋಗ , ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಗಳನ್ನು ಕೃಷಿ ಇಲಾಖೆ ಲೋಕಾರ್ಪಣೆಗೊಳಿಸುತ್ತಿದೆ. ‘ಕೃಷಿ ಸಂಜೀವಿನಿ’ ಹೆಸರಿನ ಸಂಚಾರಿ ಕೃಷಿ ವಾಹನ ರೈತರ ಮನೆಬಾಗಿಲಿಗೆ ಬರಲು ಸಜ್ಜಾಗಿದೆ.

ಇದೇ ಜ.7 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಮುಂಭಾಗ “ಕೃಷಿ ಸಂಜೀವಿನಿ” ವಾಹನಗಳನ್ನು ಕೃಷಿ ಸಚಿವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರಿಗೆ ಸಮರ್ಪಿಸುತ್ತಿದ್ದಾರೆ. ಇದೇ ವೇಳೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪರೀಕ್ಷಾ ಉಪಕರಣಗಳಿಗೆ ಚಾಲನೆ ನೀಡಲಿದ್ದಾರೆ.

ಚಿಕ್ಕ ಜಿಲ್ಲೆಗಳಿಗೆ ಒಂದು ದೊಡ್ಡ ಜಿಲ್ಲೆಗಳಿಗೆ ಎರಡರಂತೆ ರಾಜ್ಯಾದ್ಯಂತ ಒಟ್ಟು 40 “ಕೃಷಿ ಸಂಜೀವಿನಿ” ವಾಹನಗಳು ರೈತರಿಗೆ ಲೋಕಾರ್ಪಣೆಗೊಳ್ಳುತ್ತಿವೆ.

ಏನಿದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ)?

ಇದು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಟಿ , ಅತಿವೃಷ್ಟಿ , ಚಂಡಮಾರುತ , ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ . ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತೆ, ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗ – ಕೀಟಗಳ ಹತೋಟಿ, ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ, ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾಹಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ. ಕೀಟ, ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ ಹಾಗು ಸಮರ್ಪಕ ನಿರ್ವಹಣೆ ಕುರಿತಂತ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಕ್ರಿಯಾ ಯೋಜನೆಯಡಿ ಲಭ್ಯವಿರುವ ಅನುದಾನದಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ಲೋಕಾರ್ಪಣೆಗೊಳಿಸಲಾಗುತ್ತಿದೆ.

ಕೃಷಿ ಸಂಜೀವಿನಿಯ ಉದ್ದೇಶವೇನು?:

ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ / ಕಂಡುಬರಬಹುದಾದ ಕೀಟ / ರೋಗ / ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ತಿಳಿಸುವುದು, ಈಗಾಗಲೇ ರಾಜ್ಯ ಮಟ್ಟದಲ್ಲಿ ರಾಜ್ಯ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಅಸ್ಥಿತ್ವದಲ್ಲಿದ್ದು, ಸದರಿ ಸಲಹಾ ಸಮಿತಿಗಳಲ್ಲಿ ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು, ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯ ವಿಜ್ಞಾನಿಗಳು, ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳನ್ನು ಒಳಗೊಂಡಿರುತ್ತದೆ. ಕೃಷಿ ಸಂಜೀವಿನಿ ಸ್ಥಾಪನೆಯಿಂದ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲಕರವಾಗಿದೆ. ಸಂಚಾರಿ ವಾಹನದ ಸೌಲಭ್ಯದಿಂದ ಹೆಚ್ಚಿನ ಸಂಖ್ಯೆಯ ರೈತರ ತಾಕುಗಳಿಗೆ ತಾಂತ್ರಿಕ ತಂಡವು ಭೇಟಿ ನೀಡಲು ಸಹಕಾರಿಯಾಗುತ್ತದೆ. ಬೆಳೆಗಳಲ್ಲಿ ಕೀಟ ಮತ್ತು ರೋಗಗಳ ಬಾಧೆಯನ್ನು ನಿಖರವಾಗಿ ಹಾಗೂ ಸಮಯೋಚಿತವಾಗಿ ಗುರುತಿಸುವ ಸಲುವಾಗಿ ರಾಜ್ಯ ಸರ್ಕಾರದ ಅನುದಾನ ಮೂಲಕ  ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಕೀಟ / ರೋಗಗಳ ಸಮರ್ಪಕ ನಿರ್ವಹಣೆ ಹಾಗೂ ರೈತರಿಗೆ ಸಲಹೆ ನೀಡಲು ಇ – ತಂತ್ರಾಂಶ ( ಇ – ಸ್ಯಾಪ್ ) ಬಳಕೆಯ ಮೂಲಕ ನಿಯಮಿತವಾಗಿ ರೈತರ ತಾಕುಗಳಿಗೆ ಭೇಟಿ ನೀಡುವುದು . ಸರ್ವೇಕ್ಷಣೆಯಲ್ಲಿ ಕೀಟ / ರೋಗ ಬಾಧೆ ಕಂಡುಬಂದಲ್ಲಿ ತಕ್ಷಣವೇ ರೈತರಿಗೆ ಕೈಗೊಳ್ಳಬೇಕಾದ ಸಂಭವನೀಯ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರ ಮೊಬೈಲ್ ಗಳಿಗೆ ಸಂದೇಶ ಅಥವಾ ಮುದ್ರಿತ ಚೀಟಿ ನೀಡುವ ಮೂಲಕ ಉತ್ಪಾದನಾ ವೆಚ್ಚ ಮತ್ತು ಬೆಳಹಾನಿಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ರೈತರು ತಮ್ಮ ಮಟ್ಟದಲ್ಲಿ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು ಗುಣಮಟ್ಟದ ರಸಗೊಬ್ಬರಗಳನ್ನು ಖರೀದಿಸಬಹುದಾಗಿದೆ. ಈ ದಿಸೆಯಲ್ಲಿ ರೈತರು ಸುಲಭ ಪರೀಕ್ಷೆಗಳಿಂದ ರಸಗೊಬ್ಬರಗಳು ಕಲಬೆರಕೆಯಾಗಿದೆಯೇ ಅಥವಾ ನಕಲಿ ಗೊಬ್ಬರವೇ ಎಂದು ತಿಳಿಯಲು ಸುಲಭ ಪರೀಕ್ಷೆಯ ಪ್ರಾತ್ಯಕ್ಷಿಕೆಗಳನ್ನು ರೈತರಿಗೆ ನೀಡಲಾಗುವುದು, ತದನಂತರ ರೈತರು ತಮ್ಮ ಹಂತದಲ್ಲಿಯೇ ರಸಗೊಬ್ಬರಗಳ ಗುಣಮಟ್ಟವನ್ನು ಪ್ರಾರಂಭಿಕವಾಗಿ ತಿಳಿದು ಖರೀದಿಸಬಹುದಾಗಿದೆ.

ಹೇಗೆ ಕಾರ್ಯನಿರ್ವಹಿಸಲಿದೆ ಈ ಸಂಚಾರಿ ಕೃಷಿ ವಾಹನ?:155313 ಇದು ಕೃಷಿ ಸಂಜೀವಿನಿ ಸಹಾಯವಾಣಿ

ಇದು ಕೃಷಿ ಸಂಜೀವಿನಿ ಟೋಲ್ ಫ್ರೀ ಸಹಾಯವಾಣಿಯಾಗಿದ್ದು, ಈ ಸಂಖ್ಯೆಗೆ ಯಾವುದಾದರೂ ಜಿಲ್ಲೆಯಿಂದ ಕರೆ ಮಾಡಿದಲ್ಲಿ ಟೋಲ್ ಫ್ರೀ ಸಂಖ್ಯೆಯಿಂದ ಕರೆ ಮಾಡಿದ ರೈತರಿರುವ ಜಿ್ಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗುತ್ತದೆ. ಆಗ ರೈತರು ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹಾರ ಪಡೆಯಬಹುದಾಗಿದ್ದು, 155313 ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ನಂತೆ ಸಹಾಯವಾಣಿಯಾಗಿ ಕೆಲಸ ಮಾಡುತ್ತದೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...