ಉತ್ತರ ಪ್ರದೇಶದ ಬಾದಾನ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ನಿರ್ಭಯಾ ಪ್ರಕರಣವನ್ನು ನೆನಪಿಸುವ ಘಟನೆ ನಡೆದಿದೆ. ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯ್ಯಲಾಗಿದೆ. ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಮರಣೋತ್ತರ ವರದಿಯಲ್ಲಿ ಬೆಚ್ಚಿ ಬೀಳಿಸುವ ವಿಷ್ಯ ಗೊತ್ತಾಗಿದೆ. ಅತ್ಯಾಚಾರಿಗಳು ಮಹಿಳೆ ಖಾಸಗಿ ಅಂಗಕ್ಕೆ ರಾಡ್ ಹಾಕಿದ್ದಾರೆ. ಇದ್ರಿಂದ ಆಕೆಯ ಖಾಸಗಿ ಅಂಗದಲ್ಲಿ ಗಂಭೀರ ಗಾಯವಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲ ಪಾಪಿಗಳು ಮಹಿಳೆ ಕಾಲು ಹಾಗೂ ಪಕ್ಕೆಲುಬನ್ನು ಮುರಿದಿದ್ದಾರೆ. ಘಟನೆ ಹೊರ ಬರ್ತಿದ್ದಂತೆ ಪೊಲೀಸರು ಆರೋಪಿಗಳ ಬಂಧನಕ್ಕೆ ನಾಲ್ಕು ತಂಡವನ್ನು ರಚಿಸಿದ್ದಾರೆ.
ಕುಟುಂಬಸ್ಥರು ಮೂವರ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಮೂವರ ಮೇಲೂ ಅತ್ಯಾಚಾರ, ಕೊಲೆ ಪ್ರಕರಣ ದಾಖಲಿಸಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಘಟನೆ ನಡೆದು 18 ಗಂಟೆಗಳ ನಂತ್ರ ಮರಣೋತ್ತರ ಪರೀಕ್ಷೆ ನಡೆದಿದೆ. ಸಂಜೆ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ವಾಪಸ್ ಬಂದಿರಲಿಲ್ಲ. ಇಬ್ಬರು, ಮಹಿಳೆಯನ್ನು ಜನನಿಬಿಡ ಪ್ರದೇಶದಲ್ಲಿ ಬಿಟ್ಟು ಹೋಗಿದ್ದರಂತೆ. ರಕ್ತದ ಮಡುವಿನಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾಳೆ.