ನವದೆಹಲಿ: ಚಿನ್ನಾಭರಣ ಖರೀದಿಗೆ ನಿಮ್ಮ ಗ್ರಾಹಕರನ್ನು ತಿಳಿಯಿರಿ(ಕೆವೈಸಿ) ಸಲ್ಲಿಕೆ ಕಡ್ಡಾಯ ಎಂದು ಹೇಳಲಾಗಿತ್ತು. ಆದರೆ, 2 ಲಕ್ಷ ರೂ.ವರೆಗಿನ ಚಿನ್ನಾಭರಣ ಖರೀದಿಗೆ ಕೆವೈಸಿ ಬೇಕಿಲ್ಲ ಎಂದು ಹಣಕಾಸು ಮಂತ್ರಾಲಯ ಮಾಹಿತಿ ನೀಡಿದೆ.
ನಗದು ಮೂಲಕ ಖರೀದಿಸುವ ಚಿನ್ನ, ಬೆಳ್ಳಿ ಮೊದಲಾದ ಬೆಲೆಬಾಳುವ ವಸ್ತುಗಳ ಖರೀದಿಗೆ ಕೆವೈಸಿ ಕಡ್ಡಾಯವಲ್ಲ. ಭಾರಿ ಮೊತ್ತದ ನಗದು ರೂಪದ ವ್ಯವಹಾರಗಳಿಗೆ ಆಧಾರ್ ಮತ್ತು ಪ್ಯಾನ್ ನಂತಹ ದಾಖಲೆಗಳ ಸಲ್ಲಿಕೆ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.
ಕಂದಾಯ ಇಲಾಖೆ 2020ರ ಡಿಸೆಂಬರ್ 28ರಂದು ಎರಡು ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಖರೀದಿ ಮಾಡುವ ಸಂದರ್ಭದಲ್ಲಿ ಕೆವೈಸಿ ಕಡ್ಡಾಯವೆಂದು ತಿಳಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿ, 10 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ರೂಪದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರು ಮಾತ್ರ ಅಗತ್ಯವಾದ ದಾಖಲೆಗಳನ್ನು ಸಲ್ಲಿಸಬೇಕಿದೆ ಎಂದು ತಿಳಿಸಲಾಗಿದೆ.
2020ರ ಡಿಸೆಂಬರ್ 20 ರಂದೇ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಲಕ್ಷ ರೂಪಾಯಿವರೆಗೆ ಚಿನ್ನಾಭರಣ ಖರೀದಿಗೆ ಕೆವೈಸಿ ಬೇಕಿಲ್ಲವೆಂದು ನಿಯಮದ ಕುರಿತು ಸ್ಪಷ್ಟನೆ ನೀಡಲಾಗಿದ್ದು, 10 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ರೂಪದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರು ಕೆವೈಸಿ ದಾಖಲೆ ನೀಡಬೇಕಿದೆ ಎಂದು ಹೇಳಲಾಗಿದೆ.