ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ದಾಖಲೆ ಬರೆದಿದ್ದಾರೆ. ಟ್ವೀಟರ್ ನಲ್ಲಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಂಬರ್ ಒನ್ ರಾಜಕಾರಣಿಯಾಗಿದ್ದಾರೆ. ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವೀಟರ್ ಖಾತೆ ಅಮಾನತುಗೊಂಡಿರುವುದರಿಂದ ಮೋದಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.
ಹೆಚ್ಚು ಫಾಲೋವರ್ಸ್ ಹೊಂದಿರುವ ರಾಜಕಾರಣಿಯಲ್ಲಿ ಟ್ರಂಪ್ ಮೊದಲ ಸ್ಥಾನದಲ್ಲಿದ್ದರು. ಮೋದಿ ಎರಡನೇ ಸ್ಥಾನದಲ್ಲಿದ್ದರು. ಟ್ವೀಟರ್ ನಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 8 ಕೋಟಿ 87 ಲಕ್ಷ ಅನುಯಾಯಿಗಳನ್ನು ಹೊಂದಿದ್ದರು. ಭಾರತೀಯ ಪ್ರಧಾನಿ ನರೇಂದ್ರ ಮೋದಿ 6 ಕೋಟಿ 47 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಟ್ವೀಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ಅವರಿಗಿಂತ ಹೆಚ್ಚಿನ ಅನುಯಾಯಿಗಳನ್ನು ಹೊಂದಿದ್ದಾರೆ. ಬರಾಕ್ ಒಬಾಮ ಟ್ವಿಟ್ಟರ್ ನಲ್ಲಿ 12 ಕೋಟಿ 79 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಆದರೆ ಒಬಾಮಾ ಸಕ್ರಿಯ ರಾಜಕಾರಣಿಯಾಗಿಲ್ಲ. ಅದಕ್ಕಾಗಿಯೇ ಪಿಎಂ ಮೋದಿ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.