ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರ ಖಾತೆಗಳಿಗೆ ತಲಾ ಎರಡು ಸಾವಿರ ರೂ. ಮೂರು ಕಂತುಗಳಂತೆ ವಾರ್ಷಿಕ 6000 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ.
ಹೀಗೆ ಯೋಜನೆಯಡಿ 20.48 ಲಕ್ಷ ಅನರ್ಹ ರೈತರ ಖಾತೆಗಗಳಿಗೆ 1364 ಕೋಟಿ ರೂಪಾಯಿ ಪಾವತಿಸಲಾಗಿದೆ. ಆರ್.ಟಿ.ಐ. ಕಾರ್ಯಕರ್ತ ವೆಂಕಟೇಶ ನಾಯಕ್ ಎಂಬುವವರು ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಕೃಷಿ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಆದಾಯ ತೆರಿಗೆ ಪಾವತಿಸುವ ರೈತರು, ಅನರ್ಹ ವರ್ಗಕ್ಕೆ ಸೇರಿದ ರೈತರನ್ನು ಗುರುತಿಸಲಾಗಿದೆ. ಅವರ ಖಾತೆಗೆ ಜಮಾ ಆದ ಹಣವನ್ನು ವಸೂಲಿ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.