ಚಿತ್ರದುರ್ಗ: ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ NSP-Portal ನಲ್ಲಿ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜ.18 ರ ವರೆಗೆ ವಿಸ್ತರಿಸಲಾಗಿದೆ.
ಆನ್‍ಲೈನ್ ವಿಳಾಸ https://dom.karnataka.gov.in ಅಥವಾ https://scholarships.gov.xn--in-2vh3ba2fue/ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಓದುತ್ತಿರುವ ಕಾಲೇಜಿಗೆ 01 ಪ್ರತಿಯನ್ನು ಹಾಗೂ ಆಯಾ ತಾಲ್ಲೂಕಿನ ಜಿಲ್ಲಾ, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ 01 ಪ್ರತಿಯನ್ನು ಸಲ್ಲಿಸುವುದು.
NSP-Portal ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು SSP-Portal ನಲ್ಲಿಯೂ ಸಹ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ದಿನಾಂಕವನ್ನು ನಂತರ ತಿಳಿಸಲಾಗುವುದು. ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ತಮ್ಮ ಕಾಲೇಜಿನ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಎನ್‍ಎಸ್‍ಪಿ ಪೊರ್ಟಲ್‍ನಲ್ಲಿ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಕಾಲೇಜಿನಲ್ಲಿ ಒಂದು ಪ್ರತಿಯನ್ನು ವಿದ್ಯಾರ್ಥಿಗಳಿಂದ ಸ್ವೀಕರಿಸಿ, ನಿಯಮಾನುಸಾರ ಇನ್ಸಿಟ್ಯೂಟ್ ಲಾಗಿನ್‍ನಲ್ಲಿ ದಿನಾಂಕ ಫೆಬ್ರುವರಿ 5 ರ ಒಳಗಾಗಿ ವೆರಿಫೈ ಮಾಡುವುದು ಮತ್ತು ಇನ್ಸಿಟ್ಯೂಟ್ ಲಾಗಿನ್‍ನಲ್ಲಿ ಸಿಗುವ ವೆರಿಫೈಡ್, ಡಿಫೆಕ್ಟ್ ಮತ್ತು ರಿಜೆಕ್ಟ್ ರಿಪೋರ್ಟ್‍ಗಳನ್ನು ದೃಡೀಕರಿಸಿ, ಸಂಬಂಧಪಟ್ಟ ಅಲ್ಪಸಂಖ್ಯಾತರ ಜಿಲ್ಲಾ ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ತಪ್ಪದೇ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.