ಪಾಟ್ನಾ: ಅರುಣಾಚಲ ಪ್ರದೇಶದಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಯು ಪಕ್ಷದ 6 ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಮಿತ್ರಪಕ್ಷದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಬಿಹಾರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ವಿರೋಧದ ನಡುವೆಯೂ ಬಿಹಾರದಲ್ಲಿ ಪೌರತ್ವ ನೋಂದಣಿ ಕಾಯ್ದೆ ಜಾರಿಗೆ ತಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.
ಮಿತ್ರಪಕ್ಷ ಬಿಜೆಪಿಗೆ ಟಾಂಗ್ ನೀಡಿರುವ ನಿತೀಶ್ ಕುಮಾರ್, ಯಾರು ನಿಜವಾದ ಮಿತ್ರರು? ಯಾರು ನಿಜವಾದ ಶತ್ರುಗಳು? ಎಂಬುದನ್ನು ಅರ್ಥ ಮಾಡಿಕೊಳ್ಳಲು ಆಗಲಿಲ್ಲ. ವಿಧಾನಸಭೆ ಚುನಾವಣೆಗೆ 5 ತಿಂಗಳು ಇರುವಾಗಲೇ ಸೀಟು ಹಂಚಿಕೆ ಮಾಡಿಕೊಳ್ಳಬೇಕಿತ್ತು. ಹಾಗೆ ಮಾಡಿಕೊಂಡಿದ್ರೆ ನಮಗೆ ಅನುಕೂಲವಾಗುತ್ತಿತ್ತು ಎಂದು ಜೆಡಿಯು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನಿತೀಶ್ ಕುಮಾರ್ ಹೇಳಿದ್ದಾರೆ.