ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇಂದು 7 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿ ರಾಜಭವನಕ್ಕೆ ಕಳುಹಿಸಲಾಗಿದೆ. ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದರು.
ಒಂದು ಸ್ಥಾನ ಖಾಲಿ ಇಡಲಾಗಿದ್ದು, ವರಿಷ್ಠರು ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.