ವಾಷಿಂಗ್ಟನ್: ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಎರಡನೇ ಬಾರಿಗೆ ಮಹಾಭಿಯೋಗ ಹೊರಿಸಲಾಗಿದೆ.
ಅಮೆರಿಕದ ಇತಿಹಾಸದಲ್ಲೇ ಎರಡು ಸಲ ದೋಷಾರೋಪಣೆಗೆ ಗುರಿಯಾದ ಮೊದಲ ಅಧ್ಯಕ್ಷ ಟ್ರಂಪ್ ಆಗಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಪರಾಭವಗೊಂಡರೂ ಅಧಿಕಾರ ಉಳಿಸಿಕೊಳ್ಳಲು ಟ್ರಂಪ್ ಇನ್ನಿಲ್ಲದ ಪ್ರಯತ್ನ ನಡೆಸಿದ್ದರು.
ಕ್ಯಾಪಿಟಲ್ ಕಟ್ಟಡದ ಮೇಲೆ ದಾಳಿ ಹಿಂಸಾಚಾರಕ್ಕೆ ಅವರು ಪ್ರಚೋದನೆ ನೀಡಿದ ಆರೋಪ ಕೇಳಿಬಂದಿತ್ತು. ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದು, ಟ್ರಂಪ್ ಬೆಂಬಲಿಗರ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಟ್ರಂಪ್ ಗೆ ವಾಗ್ದಂಡನೆ ವಿಧಿಸಲಾಗಿದೆ. ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಡೊನಾಲ್ಡ್ ಟ್ರಂಪ್ ಗೆ ಇನ್ನೂ ಒಂದು ವಾರ ಉಳಿದಿದ್ದು, ಇದಕ್ಕಿಂತ ಮೊದಲೇ ಅವರು ಹುದ್ದೆ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.