alex Certify ರೈತ ಸಮುದಾಯಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೀಡುವ ಹಣದಲ್ಲಿ ಏರಿಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೀಡುವ ಹಣದಲ್ಲಿ ಏರಿಕೆ…?

ಕೃಷಿ ಕಾನೂನಿನ ವಿರುದ್ಧ ಹೋರಾಟ ನಡೆಯುತ್ತಿರುವ ಬೆನ್ನಲ್ಲೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಕೊರೊನಾ ಮಧ್ಯದ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಬಜೆಟ್ ನಲ್ಲಿ ರೈತರಿಗೆ ಸರ್ಕಾರ ಮತ್ತಷ್ಟು ಖುಷಿ ಸುದ್ದಿ ನೀಡುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ 6 ಸಾವಿರ ರೂಪಾಯಿ ಸಿಗ್ತಿದೆ. ಆದ್ರೆ 2021-2022ರ ಬಜೆಟ್ ನಲ್ಲಿ ಇದನ್ನು ಹೆಚ್ಚಿಸುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಲ್ಲಿ ನೀಡಲಾಗ್ತಿರುವ ಮೊತ್ತವನ್ನು ಹೆಚ್ಚಿಸುವಂತೆ ರೈತರು ಒತ್ತಾಯಿಸಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಸರ್ಕಾರ ತಿಂಗಳಿಗೆ ನೀಡುವ 500 ರೂಪಾಯಿ ಸಾಲುವುದಿಲ್ಲ. ಒಂದು ಎಕರೆ ಭತ್ತದ ಬೆಲೆಗೆ 3ರಿಂದ 3.5 ಸಾವಿರ ರೂಪಾಯಿ ಖರ್ಚಾಗುತ್ತದೆ. ಕಬ್ಬಿನ ಬೆಳೆಗಾದ್ರೆ 2ರಿಂದ ಎರಡೂವರೆ ಸಾವಿರ ಖರ್ಚಾಗುತ್ತದೆ ಎಂದು ರೈತರು ಹೇಳಿದ್ದಾರೆ. ಸರ್ಕಾರ ರೈತರಿಗೆ ನೀಡುವ ಹಣವನ್ನು ಹೆಚ್ಚಿಸಿದ್ರೆ ರೈತರಿಗೆ ನೆಮ್ಮದಿ ಸಿಗಲಿದೆ ಎಂದು ರೈತರು ಹೇಳಿದ್ದಾರೆ.

ಕೇಂದ್ರ ಸರ್ಕಾರ 2018ರಲ್ಲಿ ಈ ಯೋಜನೆ ಶುರು ಮಾಡಿದೆ. ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡಲಾಗ್ತಿದೆ. 2020ರ ಡಿಸೆಂಬರ್ 25ರಂದು ಸುಮಾರು 18,000 ಕೋಟಿ ರೂಪಾಯಿಯನ್ನು 9 ಕೋಟಿ ರೈತರ ಖಾತೆಗೆ ವರ್ಗಾಯಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...