ನವದೆಹಲಿ: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ತಮ್ಮ ಕೇಂದ್ರ ಕಚೇರಿ ಮೇಲೆಯೇ ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಂಪನಿಯೊಂದರಿಂದ ಲಂಚ ಪಡೆದ ಆರೋಪದ ಮೇಲೆ ಡಿ ವೈ ಎಸ್ ಪಿ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಡಿ ವೈ ಎಸ್ ಪಿ ಆರ್.ಕೆ.ರಿಷಿ ಹಾಗೂ ಆರ್.ಕೆ.ಸಾಂಗ್ವಾನ್, ಇನ್ಸ್ ಪೆಕ್ಟರ್ ಕಪಿಲ್ ಧಂಕಡ್ ಮತ್ತು ಸ್ಟೆನೋಗ್ರಾಫರ್ ಸಮೀರ್ ಕುಮಾರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಸಿಬಿಐ ಸಿಜಿಓ ಸಂಕೀರ್ಣದಲ್ಲಿರುವ ತನ್ನ ಸ್ವಂತ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಸಂಬಂಧಿಸಿದಂತೆ 14 ಸ್ಥಳಗಳಲ್ಲಿ ಶೋಧ ನಡೆಸಿದೆ.