alex Certify BIG NEWS: ಪ್ರಧಾನಿ ಮೋದಿ ಹಾಡಿ ಹೊಗಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಹಾಡಿ ಹೊಗಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಶಿವಮೊಗ್ಗ: ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಪ್ರಧಾನಿ ಮೋದಿ ದೂರದೃಷ್ಟಿಯಿಂದ ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬುಳ್ಳಾಪುರದಲ್ಲಿ 97ನೇ ಆರ್ ಎಎಫ್ ಬೆಟಾಲಿಯನ್ ತರಬೇತಿ ಘಟಕ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ದೂರದೃಷ್ಟಿಯಿಂದ ಕೊರೊನಾ ವಿಚಾರದಲ್ಲಿ ಇಡೀ ದೇಶ ಇಂದು ಯಶಸ್ಸು ಕಂಡಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದೆ ಎಂದರು.

ಇದೇ ವೇಳೆ ಸಿ ಆರ್ ಪಿ ಎಫ್ ದೇಶದ ಮೂಲೆ ಮೂಲೆಯಲ್ಲಿ ಕೆಲಸ ಮಾಡುತ್ತಿದ್ದು, ಸಿ ಆರ್ ಪಿ ಎಫ್ ಯೋಧರು ನಮ್ಮ ಶಕ್ತಿ. ನಾವು ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಿಸಿಕೊಳ್ಳಬೇಕು. ಸರ್ಕಾರಿ ಕೆಲಸದಲ್ಲಿಯೇ ಅತಿ ಕಠಿಣವಾದ ಕೆಲಸ ಪೊಲೀಸರ ಕೆಲಸ. ಅವರಿಗೆ ಸಮಯದ ಮಿತಿಯೆಂಬುದಿಲ್ಲ. ಕಠಿಣ ಪರಿಶ್ರಮದಿಂದ ದುಡಿಯುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...