ನವದೆಹಲಿ: ದೆಹಲಿಯ ಪ್ರತಿಷ್ಠಿತ ರಾಮಮನೋಹರ ಲೋಹಿಯಾ ಆಸ್ಪತ್ರೆಯ ವೈದ್ಯರು ಕೊವ್ಯಾಕ್ಸಿನ್ ಲಸಿಕೆಯನ್ನು ತಿರಸ್ಕರಿಸಿದ್ದಾರೆ.
ಇಂದಿನಿಂದ ದೇಶಾದ್ಯಂತ ಕೊರೋನಾ ಲಸಿಕೆ ನೀಡಿಕೆ ಕಾರ್ಯ ಆರಂಭವಾಗಿದೆ. ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆಗೆ ಅನುಮತಿ ನೀಡಲಾಗಿದೆ. ಆದರೆ, ಮಾನ್ಯತೆಯ ಪ್ರಯೋಗ ಫಲಿತಾಂಶ ಆಧರಿಸಿ ಕೊವಿಶೀಲ್ಡ್ ಲಸಿಕೆ ಪಡೆಯಲು ಬಯಸುತ್ತೇವೆ ಎಂದು ದೆಹಲಿಯ ಆರ್.ಎಂ.ಎಲ್. ಆಸ್ಪತ್ರೆಯ ವೈದ್ಯರು ಆಸ್ಪತ್ರೆಯ ವೈದ್ಯರು ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ.
ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆಯಲು ಬಯಸುವುದಿಲ್ಲ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆಯನ್ನು ನೀಡುವಂತೆ ಪತ್ರ ಬರೆದಿದ್ದಾರೆ. ದೆಹಲಿಯ ಪ್ರತಿಷ್ಠಿತ ರಾಮಮನೋಹರ ಲೋಹಿಯಾ ಆಸ್ಪತ್ರೆಯ ರೆಸಿಡೆಂಟ್ ಡಾಕ್ಟರ್ಸ್ ಅಸೋಶಿಯೇಷನ್ ತಮಗೆ ಕೊವಿಶೀಲ್ಡ್ ನೀಡುವಂತೆ ಮನವಿ ಮಾಡಿದೆ. ಆದರೆ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎ.ಕೆ. ಸಿಂಗ್ ರಾಣಾ ಶನಿವಾರ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದಾರೆ.