ಏಪ್ರಿಲ್ ನಂತರ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಏನಾದರೂ ಆರ್.ಎಸ್.ಎಸ್.ನಲ್ಲಿ ಇದ್ದರೆ? ಅವರು ಸಂಘದ ಜವಾಬ್ದಾರಿ ವಹಿಸಿದ್ದರೆ ಎಂದು ಪ್ರಶ್ನಿಸಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಎಲ್ಲೂ ಪ್ರಸ್ತಾಪವಾಗಿಲ್ಲ ಎಂದು ಹೇಳಿದ್ದಾರೆ.