ಏಪ್ರಿಲ್ ನಂತರ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮಾರ್ಕೆಟ್ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇಂತಹ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಯಡಿಯೂರಪ್ಪನವರ ಆಡಳಿತವನ್ನು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. ಮುಂದಿನ ಅವಧಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸುಧಾಕರ್ ಹೇಳಿದ್ದಾರೆ.