ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.
ಯತ್ನಾಳ್ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದರು ಸಹ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಶರಣಾಗಿರುವುದರ ಕುರಿತೂ ಯಡಿಯೂರಪ್ಪನವರು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆನ್ನಲಾಗಿದೆ. ಅಲ್ಲದೆ ಮುಖ್ಯಮಂತ್ರಿ ವಿರುದ್ಧ ಪಕ್ಷದ ಯಾವುದೇ ನಾಯಕರು ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.